ಕರ್ನಾಟಕ

karnataka

ETV Bharat / city

ಮಾರ್ಚ್ 19ರಿಂದ ಎರಡು ದಿನ ಆರ್‌ಎಸ್‌ಎಸ್ ವಾರ್ಷಿಕ ಅಧಿವೇಶನ - ಮಾರ್ಚ್ 19 ರಿಂದ ಎರಡು ದಿನ ಆರ್‌ಎಸ್‌ಎಸ್ ವಾರ್ಷಿಕ ಅಧಿವೇಶನ

ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ 35ಕ್ಕೂ ಹೆಚ್ಚು ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದು ಪತ್ರಿಕಾ ಹೇಳಿಕೆ ಮೂಲಕ ಆರ್‌ಎಸ್‌ಎಸ್ ಮಾಹಿತಿ ನೀಡಿದೆ..

two-day-rss-annual-session-from-19th-march
ಆರ್‌ಎಸ್‌ಎಸ್ ವಾರ್ಷಿಕ ಅಧಿವೇಶನ

By

Published : Mar 15, 2021, 9:04 PM IST

ಬೆಂಗಳೂರು :ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ-ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ವಾರ್ಷಿಕ ಅಧಿವೇಶನವಾದ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್​) ಮಾರ್ಚ್ 19-20ರವರೆಗೆ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ ನಡೆಯಲಿದೆ ಎಂದು ಆರ್‌ಎಸ್‌ಎಸ್ ತಿಳಿಸಿದೆ.

ರಾಜ್ಯದಲ್ಲಿ ಈವರೆಗೆ ಏಳು ಎಬಿಪಿಎಸ್‌ ಜರುಗಿದ್ದು, ಈ ಸಭೆ ಎಂಟನೆಯದ್ದಾಗಿದೆ. ಆರ್‌ಎಸ್‌ಎಸ್‌ನ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ಸುರೇಶ್ (ಭಯ್ಯಾಜಿ) ಜೋಶಿ ಸಭೆಯ ಕಲಾಪಗಳನ್ನು ನಡೆಸುತ್ತಾರೆ.

ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ 35ಕ್ಕೂ ಹೆಚ್ಚು ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದು ಪತ್ರಿಕಾ ಹೇಳಿಕೆ ಮೂಲಕ ಆರ್‌ಎಸ್‌ಎಸ್ ಮಾಹಿತಿ ನೀಡಿದೆ.

ಆರ್​ಎಸ್​ಎಸ್​​ ಹಾಗೂ ವಿವಿಧ ಸಂಘಟನೆಗಳ ವಾರ್ಷಿಕ ವರದಿ, ಸಂಘಟನೆಯ ವಿಸ್ತಾರ, ಹೊಸ ಆಯಾಮಗಳು, ಕಾರ್ಯಕ್ರಮಗಳು, ಮುಂಬರುವ ವರ್ಷದ ಯೋಜನೆ ಇತ್ಯಾದಿ ವಿಷಯಗಳು ಈ ಸಭೆಯಲ್ಲಿ ಚರ್ಚೆಯಾಗಲಿವೆ. ಜೊತೆಗೆ ಈ ಸಭೆಯಲ್ಲಿ ರಾಷ್ಟ್ರೀಯ ಮಹತ್ವವುಳ್ಳ ಕೆಲ ವಿಷಯಗಳ ಕುರಿತಾಗಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ABOUT THE AUTHOR

...view details