ಆನೇಕಲ್: ಕಾರು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಆನೇಕಲ್ನ ಸೋಲೂರು ಗೇಟ್ ಬಳಿ ನಡೆದಿದೆ. ಹೊಂಗಸಂದ್ರದ ಶಶಿಧರ್(31), ಕುಣಿಗಲ್ ಮೂಲದ ಭೈರೇಶ್ (34) ಮೃತರು. ಇವರಿಬ್ಬರೂ ಕೂಡ್ಲು ಬಳಿಯ ಗಾರ್ಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ರಾಹುಲ್, ಮಿಥುನ್, ತಿಪ್ಪೇಶ್ ಸ್ಥಿತಿ ಚಿಂತಾಜನಕವಾಗಿದೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆನೇಕಲ್‌ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಸಾವು, ಮೂವರು ಗಂಭೀರ - ಮರಕ್ಕೆ ಡಿಕ್ಕಿ ಹೊಡೆದ ಕಾರು
ಆನೇಕಲ್ನ ಸೋಲೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಘಟಿಸಿದೆ.
Car accident
ವಲಯ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ: ರಸ್ತೆಗೆ ಅಂಟಿಕೊಂಡಿದ್ದ ಮರ ತೆಗೆಯದೇ ವಲಯ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ರಸ್ತೆ ಅಗಲೀಕರಣ ಮಾಡಿದ್ದರೂ ಸಹ ಮರ ತೆರವು ಮಾಡಿರಲಿಲ್ಲ. ಹೀಗಾಗಿ, ಅಪಘಾತ ಸಂಭವಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ