ಬೆಂಗಳೂರು: ಯುವಕರನ್ನೇ ಗುರಿಯಾಗಿಸಿಕೊಂಡು ನಗರದಲ್ಲಿ ಅವ್ಯಾಹತವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವ ನೈಜಿರಿಯನ್ ಪ್ರಜೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ದಂಧೆ: ನೈಜಿರಿಯನ್ ಪ್ರಜೆ ಸೇರಿ ಇಬ್ಬರ ಬಂಧನ - ಬೆಂಗಳೂರು ಲೇಟೆಸ್ಟ್ ನ್ಯೂಸ್
ಹಲವು ವರ್ಷಗಳಿಂದ ಡ್ರಗ್ಸ್ ಮಾರಾಟ ಜಾಲದಲ್ಲಿ ತೊಡಗಿದ್ದ ಓರ್ವ ನೈಜಿರಿಯನ್ ಪ್ರಜೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ದಂಧೆ : ನೈಜಿರಿಯನ್ ಪ್ರಜೆ ಸೇರಿ ಇಬ್ಬರ ಬಂಧನ
ನೈಜಿರಿಯಾದ ಡಿಯೋ ಮ್ಯಾಂಡೆ, ಕೇರಳ ಮೂಲದ ನಿಶಾನ್ ಬಂಧಿತ ಆರೋಪಿಗಳು. ಬಂಧಿತರಿಂದ 25 ಲಕ್ಷ ಮೌಲ್ಯದ 500 ಗ್ರಾಂ ಎಂಡಿಎಂಎ ಮಾತ್ರೆಗಳು, ಮೂರು ಮೊಬೈಲ್ ಫೋನ್ಗಳು, ಒಂದು ತೂಕದ ಯಂತ್ರ ಹಾಗೂ ಹೊಂಡಾ ಬೈಕ್ ಜಪ್ತಿ ಮಾಡಿಕೊಳ್ಳಲಾಗಿದೆ.
ಹಲವು ವರ್ಷಗಳಿಂದ ನಗರದಲ್ಲಿ ಇಬ್ಬರು ವ್ಯವಸ್ಥಿತವಾಗಿ ಡ್ರಗ್ಸ್ ಸರಬರಾಜು ಮಾಡಿಕೊಂಡು, ನಗರದೆಲ್ಲೆಡೆ ಮಾರಾಟ ಮಾಡುತ್ತಿದ್ದರು. ಯಲಹಂಕದಲ್ಲಿ ಮಾರಾಟ ಮಾಡುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.