ಬೆಂಗಳೂರು:ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆ, ಯುವಕ-ಯುವತಿಯರಿಗೆ ಮಾದಕ ವಸ್ತು ಮಾರಾಟ ಮಾಡಲು ತಯಾರಿ ನಡೆಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೈಯಪ್ಪನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಡೊಂಚುಕ್ಸ್ ಒಕೆಕೆ, ಸೆಲೆಸ್ಟೈನ್ ಅನುಗ್ವಾ ಬಂಧಿತರು. ಇವರು ನಗರದಾದ್ಯಂತ ಸಿಂಥೆಟಿಕ್ ಡ್ರಗ್ ಸಾಗಣೆ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೂರ್ವ ವಿಭಾಗದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ವಿದೇಶಿಗರಾಗಿದ್ದು, ಪಾಸ್ಪೋರ್ಟ್, ವೀಸಾ ಹೊಂದದೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಹೊರ ದೇಶದಿಂದ ಮಾದಕ ವಸ್ತುಗಳನ್ನು ತರಿಸಿಕೊಂಡು ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ದೊರೆತಿದೆ.