ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿದ್ದಾರೆ.
ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ: ಚಿನ್ನಾಭರಣ, ಪಿಸ್ತೂಲ್, ಜೀವಂತ ಗುಂಡುಗಳು ವಶಕ್ಕೆ - two house thieves arrest
ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, 1 ಕೆ.ಜಿ 280 ಗ್ರಾಂ ಚಿನ್ನಾಭರಣ, ಅರ್ಧ ಕೆಜಿ ಬೆಳ್ಳಿ ಸೇರಿದಂತೆ ಪಿಸ್ತೂಲ್ ಹಾಗೂ ಐದು ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
arrest
ಖುರ್ಷಿದ್ ಖಾನ್ ಹಾಗೂ ಧೀರೇಂದ್ರ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 1 ಕೆ.ಜಿ 280 ಗ್ರಾಂ ಚಿನ್ನಾಭರಣ, ಅರ್ಧ ಕೆಜಿ ಬೆಳ್ಳಿ ಸೇರಿದಂತೆ ಪಿಸ್ತೂಲ್ ಹಾಗೂ ಐದು ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಖುರ್ಷಿದ್ ಖಾನ್, ದೆಹಲಿ ಹಾಗೂ ಹರಿಯಾಣದಿಂದ ಗ್ಯಾಂಗ್ಅನ್ನು ಕರೆತಂದು ಕಳ್ಳತನ ಮಾಡುತ್ತಿದ್ದ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶ್ರೀಮಂತರ ಮನೆಗಳಿಗೆ ಕನ್ನ ಹಾಕಿ ಪರಾರಿಯಾಗುತ್ತಿದ್ದರು. ಈ ಕುರಿತು ಕೇಂದ್ರ ತನಿಖಾ ವಿಭಾಗ ಹೆಚ್ಚಿನ ತನಿಖೆ ಕೈಗೊಂಡಿದೆ.