ಚಿಕ್ಕಮಗಳೂರು:ಜಿಲ್ಲೆಯ ಅಜ್ಜಂಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಹಾಗೂ ಕಾರಿನ ನಡುವೆ ನಡೆದ ಈ ಅಪಘಾತದಲ್ಲಿ ಇಬ್ಬರೂ ಸಾವನ್ನಪ್ಪಿದ್ದು, ವೀರಾಪುರ ಹೊಸೂರು ಗೇಟ್ ಬಳಿ ನಡೆದಿದೆ.
ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು - ಅಜ್ಜಂಪರ ಪೊಲೀಸರ ಕಾರ್ಯಾಚರಣೆ
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಭೀಕರ ಅಪಘಾತದ ಕಾರಣವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು
ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಾಬು ಹಾಗೂ ಸೇತು ಮೃತ ದುರ್ದೈವಿಗಳು. ಮೃತರು ಬೀರೂರಿನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬೀರೂರು ಕಡೆಗೆ ಸಾಗುತ್ತಿದ್ದ ಬೈಕ್ ಅಜ್ಜಂಪುರದ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಮುಖಾ ಮುಖಿಯಾಗಿ ನಡೆದ ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯ ಕುರಿತಾಗಿ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದ, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಮಾಸ್ಕ್ ಹಾಕದೇ ಬ್ಯಾಂಕ್ನೊಳಗೆ ನುಗ್ಗಲು ಯತ್ನ.. ಅನುಮತಿ ನಿರಾಕರಿಸಿದ ಸಿಬ್ಬಂದಿಗೆ ಥಳಿಸಿದ ವ್ಯಕ್ತಿ!