ಕರ್ನಾಟಕ

karnataka

ETV Bharat / city

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇಬ್ಬರು ನೈಜೀರಿಯಾ ಡ್ರಗ್ಸ್ ಪೆಡ್ಲರ್ ಅಂದರ್ - ಡ್ರಗ್ಸ್ ಪೆಡ್ಲರ್ ಅಂದರ್

ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಇಬ್ಬರು ಪ್ರಜೆಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ.

Two Nigerian drug peddlers arrested
ಬಂಧಿತ ಆರೋಪಿಗಳು

By

Published : Jun 24, 2022, 2:25 PM IST

ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಇಬ್ಬರನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಡೆನಿಯಲ್ ಹಾಗೂ ಖಾಲಿಫ್​ ಅಬುದುಲಿಹಿ ಬಂಧಿತ ಆರೋಪಿಗಳು.

ಇವರು 5 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾ ಪಡೆದು ಬೆಂಗಳೂರಿಗೆ ಆಗಮಿಸಿದ್ದರು. ಆದರೆ, ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಐಟಿ ಬಿಟಿ ಉದ್ಯೋಗಿಗಳನ್ನು ಟಾರ್ಗೆಟ್ ಮಾಡಿ 1 ಗ್ರಾಂ ಎಂಡಿಎಂಎ ಕ್ರಿಸ್ಟಲ್​​ಗೆ 5 ಸಾವಿರದಿಂದ 6‌ ರೂ. ಪಡೆಯುತ್ತಿದ್ದರಂತೆ.

ಆರೋಪಿಗಳು ಇಂದು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಂಧೆಯಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಧಿತರಿಂದ 8 ಲಕ್ಷ ರೂ. ಮೌಲ್ಯದ 80 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್ ಫೋನ್‌ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎನ್​​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನಗರ ಪೊಲೀಸರಿಂದ ಇಬ್ಬರು ಡ್ರಗ್ಸ್​ ಪೆಡ್ಲರ್​​ಗಳ ಬಂಧನ: 2.50 ಕೋಟಿ ರೂ. ಮೊತ್ತದ ಕೊಕೇನ್ ಬ್ರೌನ್ ಶುಗರ್ ವಶ

ABOUT THE AUTHOR

...view details