ದೇವನಹಳ್ಳಿ(ಬೆಂಗಳೂರು): ಜರ್ಮನಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಬೋರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಜರ್ಮನಿಯಿಂದ ಬಂದ ಪ್ರಯಾಣಿಕರ ಆರ್ಟಿಪಿಸಿಆರ್ ಟೆಸ್ಟ್ ಮಾಡಿದ್ದಾಗ, ಇಬ್ಬರು ಪ್ರಯಾಣಿಕರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. 40 ಮತ್ತು 50 ವರ್ಷದ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ.