ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಐಟಿ ದಾಳಿ: ಸಿಎಂ ಕಚೇರಿಯಿಂದ ಉಮೇಶ್ಗೆ ಗೇಟ್ ಪಾಸ್..!
ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸತ್ತಿದ್ದ ಉಮೇಶ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಉಮೇಶ್ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದಿಂದಲೇ ಹಿರಿಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಸಿಎಂ, ಕೂಡಲೇ ಉಮೇಶ್ರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಆಪ್ತ ಸಹಾಯಕರಾಗಿದ್ದ ಉಮೇಶ್ಗೆ, ಬಸವರಾಜ ಬೊಮ್ಮಾಯಿ ಸಿಎಂ ಆದ ನಂತರ ಅವರ ಕಚೇರಿಯಲ್ಲಿ ಉದ್ಯೋಗ ನೀಡಲಾಗಿತ್ತು.