ಬೆಂಗಳೂರು:ಇಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ನಲ್ಲಿ 'ನಮ್ಮ ಮೆಟ್ರೋ'ಗೆ ₹14,844 ಕೋಟಿ ಅನುದಾನ ಘೋಷಣೆಯಾಗಿದೆ.
ಬೆಂಗಳೂರು ಮೆಟ್ರೋ: ಹಂತ 2ಎ ಮತ್ತು 2ಬಿಗೆ ₹14,788 ಕೋಟಿ ಅನುದಾನ - ನಿರ್ಮಲಾ ಸೀತಾರಾಮನ್ ಬಜೆಟ್ ಲೈವ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ನಲ್ಲಿ 'ನಮ್ಮ ಮೆಟ್ರೋ'ಗೆ ₹14,844 ಕೋಟಿ ಅನುದಾನ ಘೋಷಣೆಯಾಗಿದೆ.
ಬೆಂಗಳೂರು ಮೆಟ್ರೊ
ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಈ ಕುರಿತು ಮಾಧ್ಯಮಗಳಿಗೆ ವಿವರ ನೀಡಿದ್ದು, ಸಚಿವ ಸಂಪುಟದಲ್ಲಿ ಅದಕ್ಕೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.
ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಯೋಜನೆ ಮತ್ತು ಸಿಲ್ಕ್ ಬೋರ್ಡ್ನಿಂದ ಕೆ.ಆರ್. ಪುರಂ (2ನೇ ಹಂತ) ಮತ್ತು ಕೆ.ಆರ್. ಪುರಂನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಈ ಮೆಟ್ರೋ ಯೋಜನೆಯನ್ನು ಮುಂದಿನ ಮೂರು ತಿಂಗಳಲ್ಲಿ ಪೂರ್ಣಗೊಳಿಸುವ ಚಿಂತನೆ ಹೊಂದಿದ್ದೇವೆ ಎಂದರು.