ಬೆಂಗಳೂರು:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಬಜೆಟ್ ಮಂಡಿಸಿದ್ದು, ಇದೊಂದು ಉತ್ತಮ ಬಜೆಟ್ ಆಗಿದೆ ಎಂದು ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಮಂಡನೆಯಾದ ಕೇಂದ್ರ ಬಜೆಟ್ ಸ್ವಾಗತಾರ್ಹವಾಗಿದೆ. ಇದು ಬೆಳವಣಿಗೆ ಆಧಾರಿತ ಬಜೆಟ್ ಆಗಿದೆ. ಶಿಕ್ಷಣ, ಕೃಷಿ, ಉದ್ಯೋಗ ಸೃಷ್ಟಿ, ಮೂಲಭೂತ ಸೌಕರ್ಯ, ಸಾರಿಗೆ ಸಂಪರ್ಕ, ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ.