ಕರ್ನಾಟಕ

karnataka

ETV Bharat / city

ಗೂಢಚಾರಿಕೆ: ಸಿದ್ದರಾಮಯ್ಯ ಪತ್ರ ಪರಿಶೀಲಿಸಲು ರಾಜ್ಯಕ್ಕೆ ಕೇಂದ್ರ ಗೃಹ ಇಲಾಖೆ ಸೂಚನೆ - ಗೂಢಚಾರ ಅನುಮಾನ

ತಮ್ಮ ವಿರುದ್ಧ ಗೂಢಚಾರಿಕೆ ನಡೆಯುತ್ತಿದೆ ಎಂದು ಆರೋಪಿಸಿ ಬರೆದಿದ್ದ ಪತ್ರವನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

siddu
siddu

By

Published : Nov 6, 2021, 4:21 PM IST

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ವಿರುದ್ಧ ಗೂಢಚಾರಿಕೆ ನಡೆಯುತ್ತಿದೆ ಎಂದು ಆರೋಪಿಸಿ ಬರೆದಿದ್ದ ಪತ್ರವನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

ತಮ್ಮ ವಿರುದ್ಧ ಗೂಢಚಾರಿಕೆ ನಡೆಯುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಕೇಂದ್ರ ಗೃಹ ಇಲಾಖೆಗೆ ಪತ್ರವನ್ನು ಬರೆದಿದ್ದರು. ಪೆಗಾಸಸ್ ಗೂಢಚಾರ ವಿಚಾರವಾಗಿ ಪ್ರಸ್ತಾಪ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧವೂ ಗೂಢಚಾರ ನಡೆಯುತ್ತಿದೆ ಎಂದು ದೂರಿದ್ದರು. ಇದನ್ನು ಪರಿಶೀಲಿಸಿದ ಕೇಂದ್ರ ಗೃಹ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾನೂನು ಸುವ್ಯವಸ್ಥೆ ರಾಜ್ಯ ವಿಷಯವಾಗಿರುವ ಹಿನ್ನೆಲೆಯಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.

ರಾಜ್ಯಕ್ಕೆ ಕೇಂದ್ರ ಗೃಹ ಇಲಾಖೆ ಸೂಚನೆ

ಮುಂದಿನ ಉತ್ತರವನ್ನು ನೇರವಾಗಿ ಅರ್ಜಿದಾರ ಅಥವಾ ಪತ್ರ ಬರೆದಿರುವ ಸಿದ್ದರಾಮಯ್ಯ ಅವರಿಗೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಕೇಂದ್ರ ಗೃಹ ಇಲಾಖೆ, ಆದಷ್ಟು ತ್ವರಿತವಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ.

ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ.

ABOUT THE AUTHOR

...view details