ಬೆಂಗಳೂರು :ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಘಟಕ ಆಯೋಜಿಸಿದ್ದ ಸುಶಾಸನ್ ಯಾತ್ರಾ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು.
ಎರಡು ದಿನಗಳ ರಾಜ್ಯ ಭೇಟಿಗೆ ಆಗಮಿಸಿರುವ ಅಮಿತ್ ಶಾ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸುಶಾಸನ್ ಯಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಅಮಿತ್ ಶಾ ಅವರನ್ನು ಯುವ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.