ಬೆಂಗಳೂರು: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ರಾಜ್ಯಕ್ಕೆ 1,221 ವಯಲ್ಸ್ ಒದಗಿಸಿರುವುದಾಗಿ ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದಲ್ಲಿ 11,717 ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ. ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 29,250 ವಯಲ್ಸ್ ಎಂಫೋಟೆರಿಸಿನ್-ಬಿ ಹಂಚಲಾಗಿದೆ. 481 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡು ಬಂದಿರುವ ರಾಜ್ಯಕ್ಕೆ 1,221 ವಯಲ್ಸ್ ಒದಗಿಸಲಾಗಿದ್ದು, ಹಂಚಿಕೆ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದ್ದಾರೆ.