ಬೆಂಗಳೂರು:ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆಗಳು ಚುರುಕುಗೊಂಡಿವೆ. ವೀಕ್ಷಕರಾಗಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಇಂದು ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ಪ್ರಧಾನ್ ಹಾಗೂ ರೆಡ್ಡಿ ಅವರೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ದೌಡಾಯಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂವರನ್ನು ರಾಜ್ಯದ ನಾಯಕರು ಸ್ವಾಗತಿಸಿದರು. ಇಲ್ಲಿಂದ ನೇರವಾಗಿ ಕಾವೇರಿ ನಿವಾಸಕ್ಕೆ ತೆರಳಿ ನಿರ್ಗಮಿತ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ಕೆ.ಕೆ. ಗೆಸ್ಟ್‌ಹೌಸ್‌ಗೆ ತೆರಳಿದ್ದಾರೆ. ವೀಕ್ಷಕರ ತಂಡಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದಾರೆ.