ಕರ್ನಾಟಕ

karnataka

ETV Bharat / city

ಬೆಂಗಳೂರಲ್ಲಿ ವಿಚಿತ್ರ ಘಟನೆ: ಮನೆ ಕಾಂಪೌಂಡ್​ನಲ್ಲೇ ಶವ ಸಂಸ್ಕಾರ, ಸ್ಥಳೀಯರಿಂದ ಭಾರಿ ವಿರೋಧ-ಕಲ್ಲು ತೂರಾಟ! - ಮನೆ ಕಾಂಪೌಂಡ್​ನಲ್ಲೇ ಶವ ಸಂಸ್ಕಾರ, ಸ್ಥಳೀಯರಿಂದ ಭಾರಿ ವಿರೋಧ- ಕಲ್ಲು ತೂರಾಟ!

ದಕ್ಷಿಣ ಬೆಂಗಳೂರಿನ ಪುಟ್ಟೇನಹಳ್ಳಿಯ ಪಾಂಡುರಂಗ ನಗರದಲ್ಲಿ ಕಳೆದ 3 ದಿನಗಳ ಹಿಂದೆ 80 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದರು. ಸ್ವಂತ ಮನೆಯ ಜಾಗದಲ್ಲಿಯೇ ಕುಟುಂಬದವರು ಅಂತ್ಯಕ್ರಿಯೆ ಮಾಡಿದ್ದಾರೆ. ಅಂತ್ಯಸಂಸ್ಕಾರ ಸ್ಥಳದ ಪಕ್ಕದಲ್ಲಿ ಅಪಾರ್ಟ್​ಮೆಂಟ್​​​​ಗಳು ವಾಸದ ಮನೆಗಳು ಇವೆ ಹೀಗಾಗಿ ಅಂತ್ಯಸಂಸ್ಕಾರ ನಡೆಸಿದ್ದಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಘಟನೆ: ಮನೆ ಕಾಂಪೌಂಡ್​ನಲ್ಲೇ ಶವ ಸಂಸ್ಕಾರ, ಸ್ಥಳೀಯರಿಂದ ಭಾರಿ ವಿರೋಧ- ಕಲ್ಲು ತೂರಾಟ!
A family funeral inside the compound In Bangalore

By

Published : Feb 2, 2022, 2:20 PM IST

Updated : Feb 2, 2022, 4:36 PM IST

ಬೆಂಗಳೂರು: ಸಿಲಿಕಾನ್ ಸಿಟಿಯ ಮನೆಯೊಂದರ ಕಾಂಪೌಂಡ್​ನಲ್ಲಿಯೇ ಶವ ಸಂಸ್ಕಾರ ಮಾಡಲಾಗಿದೆ. ಮನೆ ಆವರಣದಲ್ಲಿಯೇ ಅಂತ್ಯಸಂಸ್ಕಾರ ನಡೆಸಿದ್ದಕ್ಕೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿರುವ ವಿಚಿತ್ರ ಘಟನೆ ವರದಿಯಾಗಿದೆ. ವಿರೋಧ ಹೆಚ್ಚಾಗುತ್ತಿದ್ದಂತೆ ಮೃತರ ಕುಟುಂಬಸ್ಥರು ಸ್ಥಳೀಯರ ಮೇಲೆ ಕಲ್ಲು ತೂರಾಟ ಕೂಡ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ದಕ್ಷಿಣ ಬೆಂಗಳೂರಿನ ಪುಟ್ಟೇನಹಳ್ಳಿಯ ಪಾಂಡುರಂಗ ನಗರದಲ್ಲಿ ಕಳೆದ 3 ದಿನಗಳ ಹಿಂದೆ 80 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದರು. ಸ್ವಂತ ಮನೆಯ ಜಾಗದಲ್ಲಿಯೇ ಕುಟುಂಬದವರು ಅಂತ್ಯಕ್ರಿಯೆ ಮಾಡಿದ್ದಾರೆ. ಅಂತ್ಯಸಂಸ್ಕಾರ ಸ್ಥಳದ ಪಕ್ಕದಲ್ಲಿ ಅಪಾರ್ಟ್​ಮೆಂಟ್​​​​ಗಳು ವಾಸದ ಮನೆಗಳು ಇವೆ. ಹೀಗಾಗಿ ಅಂತ್ಯಸಂಸ್ಕಾರ ನಡೆಸಿದ್ದಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಶವಗಳನ್ನು ನೋಡಿ ಮನೆಯಲ್ಲಿನ ಮಕ್ಕಳು ಭಯ ಪಡುತ್ತಾರೆ. ಅಂತಹುದರಲ್ಲಿ ಜನ ವಾಸಿಸುವ ಸ್ಥಳದಲ್ಲಿ ಅಂತ್ಯಸಂಸ್ಕಾರ ಮಾಡಿದರೆ ಹೇಗೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿಲ್ಲ. ಮೊದಲು ಶವ ಹೊರತೆಗೆದು ಬೇರೆಡೆ ಹೋಗಿ ಅಂತ್ಯಸಂಸ್ಕಾರ ಮಾಡಿ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಮನೆ ಕಾಂಪೌಂಡ್​ನಲ್ಲೇ ಶವ ಸಂಸ್ಕಾರ

ಕಲ್ಲು ತೂರಾಟ:ವಿರೋಧ ಹೆಚ್ಚಾಗುತ್ತಂತೆ ಮೃತರ ಕುಟುಂಬದವರು ಲೇಔಟ್ ಅಸೋಸಿಯೇಷನ್​ ಅಧ್ಯಕ್ಷರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ವಿಷಯ ತಿಳಿದ ಪುಟ್ಟೇನಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತರ ಕುಟುಂಬಸ್ಥರು ಮತ್ತು ನೆರೆ ಹೊರೆಯವರ ಮನವೊಲಿಸುವುದರಲ್ಲಿ ನಿರತರಾಗಿದ್ದಾರೆ.

ಜನವಸತಿ ಪ್ರದೇಶಗಳಲ್ಲಿ ಅಂತ್ಯ ಸಂಸ್ಕಾರ ನಿಷಿದ್ಧ: ಜನವಸತಿ ಪ್ರದೇಶಗಳಲ್ಲಿ ಅಂತ್ಯ ಸಂಸ್ಕಾರ ಮಾಡುವ ಹಾಗಿಲ್ಲ ಎಂಬ ನಿಯಮವಿದೆ. ಸ್ವಂತ ಜಾಗವಿದ್ದರೆ. ಭೂ ಮಾಲೀಕನ ಜಾಗದಲ್ಲಿಯೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕೊಟ್ಟರೂ ಅಕ್ಕಪಕ್ಕದ ಮನೆಯವರ ಅನುಮತಿ ಅನಿವಾರ್ಯ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ:ಲಸಿಕೆ ಪಡೆದ ವೈದ್ಯಕೀಯ ವಿದ್ಯಾರ್ಥಿನಿ ಸಾವು ಆರೋಪ ; 1000 ಕೋಟಿ ರೂ. ಪರಿಹಾರ ಕೋರಿ ಪೋಷಕರಿಂದ ಕೋರ್ಟ್‌ಗೆ ಮೊರೆ

Last Updated : Feb 2, 2022, 4:36 PM IST

ABOUT THE AUTHOR

...view details