ಬೆಂಗಳೂರು: ರಾಜಧಾನಿಯಲ್ಲಿ ಮೂಕ ಪ್ರಾಣಿಗಳ ಜೀವಕ್ಕೆ ಬೆಲೆಯೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಮಲಗಿದ್ದ ಬೀದಿ ನಾಯಿಯ ಮೇಲೆ ಕಾರು ಹತ್ತಿಸಿದ ಪ್ರಕರಣ ಮಾಸುವ ಮುನ್ನವೇ ಅದೇ ರೀತಿ ಬೀದಿ ನಾಯಿ ಮೇಲೆ ಕಾರಿ ಹರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಹರಿದ ಕಾರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ
ಬೀದಿ ನಾಯಿಯ ಮೇಲೆ ಅಪರಿಚಿತ ವ್ಯಕ್ತಿತಯೋರ್ವ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಫೆಬ್ರವರಿ 2ರಂದು ಬೆಂಗಳೂರಿನ ಕೂಕ್ಟೌನ್ನ ಮೆಕ್ಫೆರ್ಸನ್ ರಸ್ತೆಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ: ಸಿಸಿಟಿವಿಯಲ್ಲಿ ದೃಶ್ಯ
ಫೆ.2ರಂದು ಕೂಕ್ಟೌನ್ನ ಮೆಕ್ ಫೆರ್ಸನ್ ರಸ್ತೆಯಲ್ಲಿ ರಾತ್ರಿ ಅಪರಿಚಿತ ವ್ಯಕ್ತಿಯೋರ್ವ ಬೀದಿ ನಾಯಿ ಮೇಲೆ ಕಾರು ಹತ್ತಿಸಿದ್ದಾನೆ. ಕೃತ್ಯ ಎಸಗಿದ ಬಳಿಕ ಕಾರು ನಿಲ್ಲಿಸಿದೆ ಅಮಾನವೀಯತೆ ಮೆರೆದಿದ್ದಾನೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡು ಒದ್ದಾಡುತ್ತಿದ್ದ ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಇದನ್ನೂ ಓದಿ:ಬೀದಿನಾಯಿ ಮೇಲೆ ಕಾರು ಹರಿಸಿ ಕೊಂದ ಪಾಪಿ: 'ಲಾರಾ' ಅಂತ್ಯಕ್ರಿಯೆಗೆ ಎಲ್ಲರೂ ಬರುವಂತೆ ನಟಿ ರಮ್ಯಾ ಕರೆ