ಬೆಂಗಳೂರು :ಡೊಮೆಸ್ಟಿಕ್ ಏರ್‌ಲೈನ್ಸ್‌ಗಳಲ್ಲಿ ಕನ್ನಡದಲ್ಲಿ ಮಾಹಿತಿ ನೀಡುವ ಸೇವೆಯನ್ನು ಸ್ಥಗಿತ ಮಾಡಲಾಗಿದೆ. ಹೀಗಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಹಿಂದೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಜಂಟಿಯಾಗಿ ಕ್ರಮವಹಿಸಿ ಕರ್ನಾಟಕ ರಾಜ್ಯದೊಳಗೆ ಕಾರ್ಯ ನಿರ್ವಹಿಸುವ ಎಲ್ಲಾ ಡೊಮೆಸ್ಟಿಕ್ ಏರ್‌ಲೈನ್ಸ್‌ಗಳಲ್ಲಿ ಕನ್ನಡದಲ್ಲಿಯೇ ಮಾಹಿತಿ ನೀಡುವಂತೆ ಸೂಚಿಸಿದ್ದರು.
ಈ ಜಂಟಿ ಪ್ರಯತ್ನಕ್ಕೆ ಪ್ರತಿಫಲವಾಗಿ ಕರ್ನಾಟಕದಲ್ಲಿರುವ ವಿಮಾನ ನಿಲ್ದಾಣಗಳಲ್ಲಿ ಸೇವೆ ಒದಗಿಸುವ ಡೊಮೆಸ್ಟಿಕ್ ಏರ್‌ಲೈನ್ಸ್‌ಗಳು ವಿಮಾನಯಾನದ ಪ್ರಯಾಣಿಕರಿಗೆ ಕನ್ನಡದಲ್ಲಿ ಸೇವೆ ಒದಗಿಸುತ್ತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಡೊಮೆಸ್ಟಿಕ್ ಏರ್‌ಲೈನ್ಸ್‌ಗಳು ಕನ್ನಡದಲ್ಲಿ ಸೇವೆ ಒದಗಿಸುವುದನ್ನು ಸ್ಥಗಿತಗೊಳಿಸಿರುವುದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಗಮನಕ್ಕೆ ಬಂದಿದೆ.