ಬೆಂಗಳೂರು :ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಮಾಜಿ ಸಚಿವ ಹಾಗೂ ಶಾಸಕ ಯು ಟಿ ಖಾದರ್ ನೇಮಕಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದಾರೆ.
ಇದುವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದರು. ಇನ್ನೂ ಒಂದು ವರ್ಷದ ಎರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ.
ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಯುಟಿ ಖಾದರ್ ಅವರನ್ನೇ ನಾಯಕನನ್ನಾಗಿ ಘೋಷಿಸಲಾಗಿದ್ದು, ಇದರ ಹಿಂದೆ ಅಲ್ಪಸಂಖ್ಯಾತ ಮುಸಲ್ಮಾನ್ ಸಮುದಾಯದವರಿಗೆ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ ಎಂಬುದನ್ನು ಸಹ ತಿಳಿಸುವ ಪ್ರಯತ್ನ ಮಾಡಲಾಗಿದೆ.
ಇದನ್ನೂ ಓದಿ: ಸಿದ್ದರಾಮಯ್ಯ-ಪಟ್ಟಣ್ ನಡುವಿನ ಪಿಸು ಮಾತಿನಿಂದ ಕಾಂಗ್ರೆಸ್ ಒಳ ಜಗಳ ಬೀದಿಗೆ : ಸಚಿವ ಆರ್.ಅಶೋಕ್