ಬೆಂಗಳೂರು:ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಿಂದ ಹೆಚ್ಚುವರಿಯಾಗಿ ಐದು ಮಾರ್ಗಗಳಲ್ಲಿ 'ವಾಯು ವಜ್ರ' ಹವಾನಿಯಂತ್ರಿತ ಬಸ್‌ಗಳ ಸೇವೆಯನ್ನು ಬಿಎಂಟಿಸಿ ಆರಂಭಿಸಲಿದೆ ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್, ಕೆಂಪೇಗೌಡ ಬಸ್ ನಿಲ್ದಾಣದಿಂದ ಜನಪ್ರಿಯ ಟೌನ್‌ಶಿಪ್, ಕಾವೇರಿ ಭವನದಿಂದ ದೊಡ್ಡಬಳ್ಳಾಪುರ, ಕೆಂಪೇಗೌಡ ಬಸ್ ನಿಲ್ದಾಣದಿಂದ ವೈಟ್‌ಫೀಲ್ಡ್ ಟಿಟಿಎಂಸಿ, ಹೆಬ್ಬಾಳದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಮಾರ್ಗಗಳಲ್ಲಿ ವಜ್ರ ಸೇವೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹೇಳಿದೆ.