ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಲಸಿಕಾ ಅಭಿಯಾನದಲ್ಲಿ, ನ್ಯಾಯಾಲಯದ ನಿರ್ದೇಶನದಂತೆ ವಿಕಲಚೇತನರಿಗೆ ಆದ್ಯತೆ ನೀಡಲಾಗಿದ್ದು, ಈವರೆಗೆ 8.62 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.
ಓದಿ: ಬ್ಲ್ಯಾಕ್ ಫಂಗಸ್ನಿಂದ ಗುಣಮುಖರಾದವರಗಿಂತ ಮೃತಪಟ್ಟವರೇ ಹೆಚ್ಚು.. ಸರ್ಕಾರದ ಮಾಹಿತಿ!
ಸರ್ಕಾರ ಸಲ್ಲಿಸಿರುವ ಲಿಖಿತ ಹೇಳಿಕೆಯಲ್ಲಿ ರಾಜ್ಯದಲ್ಲಿ 8,62,028 ವಿಕಲಚೇತರಿದ್ದಾರೆ. ಇವರಲ್ಲಿ 18 ವರ್ಷ ಮೇಲ್ಪಟ್ಟ 2,49,504 ವಿಕಲಚೇತನರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲಾಗಿದೆ. ಅದೇ ರೀತಿ ಸ್ಲಂ ನಿವಾಸಿಗಳಿಗೆ, ಕೋವಿಡ್ ವಾರಿಯರ್ಸ್ ಕುಟುಂಬಗಳಿಗೂ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.