ಬೆಂಗಳೂರು: ಬೃಹತ್ ಆರೋಗ್ಯ ಶಿಬಿರ ಆಯೋಜಿಸುವ ಮೂಲಕ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಬೆಂಗಳೂರಿನ ಚಿಕ್ಕ ಲಾಲ್ ಬಾಗ್ನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ವಾಜಪೇಯಿ 96ನೇ ಜನ್ಮದಿನ, ಉಚಿತ ಆರೋಗ್ಯ ತಪಾಸಣೆ ನಡೆಸುವ ಮೂಲಕ ಬಿಜೆಪಿಯಿಂದ ನಮನ! - ಬೆಂಗಳೂರಿನ ಚಿಕ್ಕ ಲಾಲ್ ಬಾಗ್ ನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು
ಬೃಹತ್ ಆರೋಗ್ಯ ಶಿಬಿರ ಆಯೋಜಿಸುವ ಮೂಲಕ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಬೆಂಗಳೂರಿನ ಚಿಕ್ಕ ಲಾಲ್ ಬಾಗ್ನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
![ವಾಜಪೇಯಿ 96ನೇ ಜನ್ಮದಿನ, ಉಚಿತ ಆರೋಗ್ಯ ತಪಾಸಣೆ ನಡೆಸುವ ಮೂಲಕ ಬಿಜೆಪಿಯಿಂದ ನಮನ! Kn_bng_1_atal_birthday_health_camp_vis_ka10013](https://etvbharatimages.akamaized.net/etvbharat/prod-images/768-512-5493919-thumbnail-3x2-lek---copy.jpg)
ಅಜಾತಶತ್ರು, ಉತ್ತಮ ಆಡಳಿತ ಮತ್ತು ಕಾರ್ಯವೈಖರಿಯಿಂದ ಗುರುತಿಸಿಕೊಂಡಿದ್ದ ಬಿಜೆಪಿಯ ಹಿರಿಯ ನಾಯಕ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರಿಗೆ ಇಂದು 96ನೇ ಹುಟ್ಟುಹಬ್ಬ. ವಾಜಪೇಯಿ ರವರು ನಮ್ಮನ್ನೆಲ್ಲ ಬಿಟ್ಟು ಅಗಲಿದ್ದಾರೆ. ಆದರೆ ಅವರ ಆದರ್ಶಗಳನ್ನು ಶಾಶ್ವತವಾಗಿವೆ. ಅವರನ್ನು ಸ್ಮರಿಸಲು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಮಾಜಿ ಪಾಲಿಕೆ ಸದಸ್ಯ ಶಿವಕುಮಾರ್ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದರು. ಶಿಬಿರದಲ್ಲಿ ರಕ್ತದಾನ ನೇತ್ರದಾನ ಮತ್ತು ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸದಾನಂದಗೌಡ ಮತ್ತು ಬಿಜೆಪಿ ಸಂಸದ ಪಿ.ಸಿ. ಮೋಹನ್ ಉದ್ಘಾಟಿಸಿದರು.