ಕರ್ನಾಟಕ

karnataka

ETV Bharat / city

ಮಾಜಿ ಸಿಎಂ ಗುಂಡೂರಾವ್ ಪತ್ನಿ ನಿಧನಕ್ಕೆ ಬಿಜೆಪಿ ನಾಯಕರಿಂದ ಸಂತಾಪ - ಬೆಂಗಳೂರು ಲೇಟೆಸ್ಟ್​ ನ್ಯೂಸ್​

ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಪತ್ನಿ ಮತ್ತು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರ ನಿಧನಕ್ಕೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

Varalakshmi Gundurao passes away
ಮಾಜಿ ಸಿಎಂ ಗುಂಡೂರಾವ್ ಪತ್ನಿ ನಿಧನಕ್ಕೆ ಬಿಜೆಪಿ ನಾಯಕರಿಂದ ಸಂತಾಪ

By

Published : Jan 6, 2021, 3:01 PM IST

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಧರ್ಮಪತ್ನಿ ವರಲಕ್ಷ್ಮಿ ಗುಂಡೂರಾವ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

"ವರಲಕ್ಷ್ಮಿ ಗುಂಡೂರಾವ್ ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ." ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

"ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಅವರ ಧರ್ಮಪತ್ನಿ ವರಲಕ್ಷ್ಮಿ ಗುಂಡೂರಾವ್ ಅವರು ನಿಧನರಾದರೆಂಬ ಸುದ್ದಿ ಕೇಳಿದೆ. ನನ್ನ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಪುತ್ರರಾದ ದಿನೇಶ್ ಗುಂಡೂರಾವ್ ಮತ್ತು ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರಕಲಿ." ಎಂದು ಸಚಿವ ಸುರೇಶ್ ಕುಮಾರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಪತ್ನಿ ಮತ್ತು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ‌ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವರಲಕ್ಷ್ಮಿ ಗುಂಡೂರಾವ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರ ಕುಟುಂಬ ಮತ್ತು ಬಂಧುಗಳಿಗೆ ಸಾವಿನ ಆಘಾತವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಕಟೀಲ್ ಪ್ರಾರ್ಥಿಸಿದ್ದಾರೆ.

ABOUT THE AUTHOR

...view details