ಕರ್ನಾಟಕ

karnataka

ETV Bharat / city

ವಿವಿಧ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಗೆ  ದಿನಾಂಕ ಘೋಷಣೆ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಹಾಗೂ 14 ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣಾ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಉಪ ಚುನಾವಣೆ

By

Published : Oct 20, 2019, 10:03 PM IST

ಬೆಂಗಳೂರು:ಒಂದು ಜಿಲ್ಲಾ ಪಂಚಾಯತಿ, 4 ತಾಲೂಕು ಪಂಚಾಯತಿ ಹಾಗೂ 213 ಗ್ರಾಮ ಪಂಚಾಯತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.

ರಾಜ್ಯ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ

ಚಾಮರಾಜನಗರ ಜಿಲ್ಲಾ ಪಂಚಾಯತ್ ಹಾಗೂ ಯಳಂದೂರು, ಉಡುಪಿ (ಬ್ರಹ್ಮಾವರ), ಗದಗ, ಕುಷ್ಟಗಿ ತಾಲೂಕು ಪಂಚಾಯತ್​ಗಳಲ್ಲಿ ತೆರವಾದ ಸದಸ್ಯ ಸ್ಥಾನಗಳಿಗೆ ನವಂಬರ್ 12ಕ್ಕೆ ಉಪ ಚುನಾವಣೆ ನಡೆಯಲಿದೆ.

14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ:

ಇದೇ ವೇಳೆ 14 ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣಾ ದಿನಾಂಕವನ್ನು ಆಯೋಗ ಘೋಷಿಸಿದೆ. 2 ಮಹಾನಗರ ಪಾಲಿಕೆ, 6 ನಗರ ಸಭೆ, 3 ಪುರಸಭೆ ಹಾಗೂ 3 ಪಟ್ಟಣ ಪಂಚಾಯತಿಗಳಿಗೆ ನವಂಬರ್ 12ರಂದು ಚುನಾವಣೆ ನಡೆಯಲಿದೆ. ಒಟ್ಟು 418 ವಾರ್ಡ್​ಗಳಲ್ಲಿ ಚುನಾವಣೆ ನಡೆಯಲಿದೆ.

For All Latest Updates

TAGGED:

ABOUT THE AUTHOR

...view details