ಬೆಂಗಳೂರು: ಸೆಕ್ಷನ್ 144 ಜಾರಿಗೊಳಿಸಿದ್ದರೂ ನಗರದ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆ ಯತ್ನ: ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ - new year party in bengaluru
![ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆ ಯತ್ನ: ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ Vatal Nagaraj](https://etvbharatimages.akamaized.net/etvbharat/prod-images/768-512-10076716-thumbnail-3x2-vatal.jpg)
02:25 January 01
ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ
ರೂಪಾಂತರಿ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಗರ ಪೊಲೀಸರು ನಿರ್ಬಂಧ ಹೇರಿ, ಸೆಕ್ಷನ್ 144 ಜಾರಿಗೊಳಿಸಿದ್ದರು. ಆದರೆ ನಿಷೇಧಾಜ್ಞೆಗೆ ವಿರೋಧ ವ್ಯಕ್ತಪಡಿಸಿ, ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಮುಂದಾಗಿದ್ದಕ್ಕೆ ಪೊಲೀಸರು ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಹೊಸ ವರ್ಷಾಚರಣೆ ವೇಳೆ ಗುಮ್ಮಟನಗರಿಯಲ್ಲಿ ಚೆಲ್ಲಿದ ರಕ್ತ.!
ಪ್ರತಿ ವರ್ಷ ನೂತನ ವರ್ಷ ಆಚರಣೆ ಮಾಡುತ್ತಿದ್ದ ನಗರದ ಪ್ರಮುಖ ಸ್ಥಳಗಳ ಬಳಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಗುಂಪು ಸೇರದಂತೆ ಮುನ್ನಚ್ಚರಿಕೆ ವಹಿಸಲಾಗಿದೆ.