ಬೆಂಗಳೂರು: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ವಾಹನಕ್ಕೆ ಹಗ್ಗ ಕಟ್ಟಿ ಕತ್ತೆಗಳಿಂದ ಎಳೆಸುವ ಮೂಲಕ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ವಾಹನಕ್ಕೆ ಹಗ್ಗ ಕಟ್ಟಿ ಕತ್ತೆಗಳಲ್ಲಿ ಎಳೆಸಿ ತೈಲ ಬೆಲೆ ಏರಿಕೆ ಖಂಡಿಸಿದ ವಾಟಾಳ್
ಜಾಗತಿಕವಾಗಿ ತೈಲ ಬೆಲೆ ಕುಸಿತವಾಗಿದ್ದರೂ ದೇಶದಲ್ಲಿ ಇಂಧನ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್
ಪೆಟ್ರೋಲ್, ಡಿಸೇಲ್ ದರ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನರಿಂದ ಹಣ ಲೂಟಿ ಮಾಡುತ್ತಿದೆ. ಈ ಕೂಡಲೇ ಸರ್ಕಾರ ತೈಲ ಬೆಲೆ ಇಳಿಸಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.
ಪೊಲೀಸರು ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ. ಹೀಗಾಗಿ ವಾಟಾಳ್ ನಾಗರಾಜ್ ಹಾಗು ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.