ಬೆಂಗಳೂರು:ಕೊರೊನಾಗೆ ಸೋಂಕಿಗೆ ಸೂಕ್ತ ಚಿಕಿತ್ಸೆ ಸಿಗದೆ ಪ್ರತಿದಿನ 100ಕ್ಕೂ ಅಧಿಕ ರೋಗಿಗಳು ರಾಜ್ಯದಲ್ಲಿ ಸಾವನ್ನಪ್ಪುತ್ತಿದ್ದಾರೆ. ಅವರ ಪ್ರಾಣ ಉಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕನ್ನಡ ಪರ ಹೋರಟಗಾರ ವಾಟಾಳ್ ನಾಗರಾಗ್ ಆರೋಪಿಸಿದ್ದಾರೆ.
ಸೋಂಕಿತರಿಗೆ ಸಿಗದ ಚಿಕಿತ್ಸೆ: ನಡು ರಸ್ತೆಯಲ್ಲೇ ಚಾಪೆ ಹಾಸಿ ಮಲಗಿ ಪ್ರತಿಭಟಿಸಿದ ವಾಟಾಳ್ ನಾಗರಾಜ್
ಕೊರೊನಾ ಸೋಂಕಿತರ ಜೀವ ಉಳಿಸಿ ಎಂದು ಒತ್ತಾಯಿಸಿ ನಗರದ ಮೈಸೂರು ಬ್ಯಾಂಕ್ ವೃತ್ತದ ರಸ್ತೆಯ ನಡುವೆಯೇ ಚಾಪೆ ಹಾಸಿಕೊಂಡು ಏಕಾಂಗಿಯಾಗಿ ಮಲಗಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್
ಸೋಂಕಿತರ ಪ್ರಾಣ ಉಳಿಸಿ ಎಂದು ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಚಾಪೆ ಹಾಸಿ ಮಲಗಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ಸೋಂಕು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಬಡವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಸರ್ಕಾರದ ಮಾತು ಕೇಳುತ್ತಿಲ್ಲ. ಕೂಡಲೇ ಸರ್ಕಾರ ಬಡವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.