ಮೈಸೂರು: ಪಠ್ಯದಿಂದ ಟಿಪ್ಪು ಸುಲ್ತಾನ್ ವಿಚಾರವನ್ನು ಕೈಬಿಟ್ಟರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗಲಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ರವಾನಿಸಿದ್ದಾರೆ.
ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ದೇಶಕ್ಕಾಗಿ ಹೋರಾಟ ಮಾಡಿದ ವ್ಯಕ್ತಿ, ಆತನ ಹೆಸರನ್ನ ಇತಿಹಾಸದ ಪುಟಗಳಿಂದ ಅಳಿಸಿಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿಗಳ ಮಾತನ್ನು ಯಾವ ಸಚಿವರು ಕೇಳುತ್ತಿಲ್ಲ. ಅಲ್ಲದೆ ಮಂತ್ರಿಗಳಲ್ಲಿ ಹೊಂದಾಣಿಕೆ ಇಲ್ಲ. ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಏರುತ್ತಿದೆ ಎಂದು ವಾಟಾಳ್ ವಾಗ್ದಾಳಿ ನಡೆಸಿದರು.
ಪಠ್ಯದಿಂದ ಟಿಪ್ಪು ವಿಚಾರ ಕೈ ಬಿಟ್ಟರೆ ರಾಜ್ಯದಲ್ಲಿ ಕ್ರಾಂತಿಯಾಗಲಿದೆ ಆನ್ಲೈನ್ ಹೆಸರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಜನರನ್ನ ಸುಲಿಗೆ ಮಾಡುತ್ತಿವೆ. ಶಿಕ್ಷಣವನ್ನು ರಾಷ್ಟ್ರೀಕರಣ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲು ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಆನ್ಲೈನ್ ಶಿಕ್ಷಣ ವ್ಯವಸ್ಥೆ ಮಾಡಲು ಮುಂದಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಬಡ ವಿದ್ಯಾರ್ಥಿಗಳು ಲ್ಯಾಪ್ಟಾಪ್ ಹಾಗೂ ಇಂಟರ್ನೆಟ್ನ್ನು ಹೇಗೆ ಹೊಂದಿಸಿಕೊಳ್ಳಬೇಕು ಎಂದು ಪ್ರಶ್ನಿಸಿದರು.