ಬೆಂಗಳೂರು: ರಾಜ್ಯದಾದ್ಯಂತ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಸಾಕಷ್ಟು ಬೆಳೆಗಳು ಮಳೆಗೆ ನಾಶವಾಗಿದ್ದರೆ, ಇನ್ನಷ್ಟು ಕಡೆ ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಲುಪಿಸಲಾಗದೆ ಪರದಾಡುವ ಸ್ಥಿತಿ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ತರಕಾರಿ ಬೆಲೆಗಳು ಗಗನಕ್ಕೇರಿದ್ದು, ನಗರದಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಮಳೆ ಕಡಿಮೆಯಾಗುವವರೆಗೂ ದಿನನಿತ್ಯದ ತರಕಾರಿ ಬೆಳೆಗಳ (Vegetable Rate) ಬೆಲೆ ಕೈಸುಡೋದು ಗ್ಯಾರಂಟಿ. ನಗರಕ್ಕೆ ತರಕಾರಿಗಳ ಸರಬರಾಜು ಕಡಿಮೆಯಾಗಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ಹಾಗೂ ನಿರಂತರ ಮಳೆಯಿಂದಾಗಿ ತಳ್ಳುವ ಗಾಡಿಗಳಲ್ಲಿ ತರಕಾರಿ ಮಾರಾಟವಾಗದೆ ವ್ಯಾಪಾರಿಗಳೂ ನಷ್ಟ ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಶಾಲೆಗಳಿಗೆ 2 ದಿನ ರಜೆ
ಟೊಮೆಟೋ, ಬೀನ್ಸ್, ಕ್ಯಾರೆಟ್, ದಪ್ಪ ಮೆಣಸಿನಕಾಯಿ ಸೇರಿದಂತೆ ಹಲವು ತರಕಾರಿಗಳ ಬೆಲೆಗಳಲ್ಲಿ ಏರಿಕೆಯಾಗಿದೆ.