ಕರ್ನಾಟಕ

karnataka

ETV Bharat / city

Video: ಪುಂಡರ ಅಟ್ಟಹಾಸ.. ಮನೆಗಳ ಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳ ಗಾಜು ಪುಡಿ ಪುಡಿ - bengaluru ashok nagar police

ಕೋವಿಡ್ ಕರ್ಫ್ಯೂ ಮಧ್ಯೆಯೇ ಪುಂಡರು ಅಟ್ಟಹಾಸ ಮೆರೆದಿದ್ದು, ಬೆಂಗಳೂರಿನಲ್ಲಿ ಮನೆಗಳ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಗಾಜನ್ನು ಪುಡಿ ಮಾಡಿದ್ದಾರೆ.

vehicles glasses  crushed by perpetrators In bengaluru while night curfew
ಪುಂಡರ ಅಟ್ಟಹಾಸ: ಮನೆಗಳ ಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳ ಗಾಜು ಪುಡಿ ಪುಡಿ

By

Published : Jan 9, 2022, 2:51 PM IST

ಬೆಂಗಳೂರು:ನಗರದಲ್ಲಿ ಪುಂಡರು ರಾತ್ರೋರಾತ್ರಿ ಕೋವಿಡ್ ಕರ್ಫ್ಯೂ ಮಧ್ಯೆಯೂ ಅಟ್ಟಹಾಸ ಮೆರೆದಿದ್ದಾರೆ. ಗಾಂಜಾ ನಶೆಯಲ್ಲಿದ್ದ ಇಬ್ಬರು ಪುಂಡರು ಮಾಸ್ಕ್ ಧರಿಸಿ ವಾಹನಗಳ ಗಾಜುಗಳನ್ನು ಪುಡಿ ಮಾಡಿ ಪರಾರಿಯಾಗಿರುವ ಘಟನೆ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ.

ರಸ್ತೆ ಬದಿ ಸಾಲಾಗಿ ನಿಲ್ಲಿಸಿದ್ದ ಐದಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಏರಿಯಾದಲ್ಲಿದ್ದ ಸಿಸಿಟಿವಿಯಲ್ಲಿ ಪುಂಡರ ದುಷ್ಕೃತ್ಯ ಸೆರೆಯಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಅಶೋಕ ನಗರ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಅಶೋಕನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕರ್ಫ್ಯೂ ನಿಯಮ ಉಲ್ಲಂಘಿಸಿ ಶ್ವಾನದ ಅದ್ದೂರಿ ಹುಟ್ಟುಹಬ್ಬ : ಅಹಮದಾಬಾದ್​​ನಲ್ಲಿ ಮೂವರ ಬಂಧನ

ABOUT THE AUTHOR

...view details