ಕರ್ನಾಟಕ

karnataka

ETV Bharat / city

ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮನ - ಬೆಂಗಳೂರು

ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಬಳಿಕ ಬುಧವಾರ ನಗರದಿಂದ ಪುಣೆಗೆ ತೆರಳಲಿದ್ದಾರೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮನ

By

Published : Sep 24, 2019, 2:46 AM IST

ಬೆಂಗಳೂರು: ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಇಂದು ನಗರಕ್ಕೆ ಆಗಮಿಸುತ್ತಿದ್ದು, ಎರಡು ದಿನಗಳ ನಂತರ ಪುಣೆಗೆ ತೆರಳಲಿದ್ದಾರೆ.

ಇಂದು ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಜಯನಗರದ ಬಿಹೆಚ್ಎಸ್ ಉನ್ನತ ಶಿಕ್ಷಣ ಸೊಸೈಟಿಯ ಪ್ಲಾಟಿನಂ ಜ್ಯುಬಿಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯಪಾಲ ವಜುಭಾಯ್ ವಾಲಾ, ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಶತಾಯುಷಿ ನಿಘಂಟು ತಜ್ಞ ಡಾ. ಜಿ.ವೆಂಕಟಸುಬ್ಬಯ್ಯ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಬುಧವಾರ ಕೃಷಿ ವಿವಿಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪುಣೆಗೆ ತೆರಳುತ್ತಿದ್ದಾರೆ.

ABOUT THE AUTHOR

...view details