ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಹಾಗೂ ವಿನಯ್ ಸೋದರ ಮಾವ ಚಂದ್ರಶೇಖರ್ ಇಂಡಿ ಮತ್ತು ವಿನಯ್ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡ ಹಾಜರಾಗಿದ್ದಾರೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ವಿನಯ್ ಕುಲಕರ್ಣಿ ಸಂಬಂಧಿಕರು - Yogesh Gowda murder case
ಧಾರವಾಡ ಜಿ.ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯಕ್ಕೆ ವಿಜಯ್ ಕುಲಕರ್ಣಿ ಹಾಗೂ ಚಂದ್ರಶೇಖರ್ ಇಂಡಿ ಮತ್ತು ಸೋಮು ನ್ಯಾಮಗೌಡ ಆಗಮಿಸಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾದ ವಿನಯ್ ಸಂಬಂಧಿಗಳು
ನ್ಯಾಯಾಲಯಕ್ಕೆ ಹಾಜರಾದ ವಿನಯ್ ಸಂಬಂಧಿಗಳು
ಹೆಚ್ಚಿನ ವಿಚಾರಣೆ ಹಿನ್ನೆಲೆ ಸಿಬಿಐ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದ್ದು, ಈ ಹಿನ್ನೆಲೆ ಕೋರ್ಟ್ಗೆ ಹಾಜರಾಗಿದ್ದಾರೆ. ಮೂವರು ಕೋರ್ಟ್ ಆವರಣದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಒಳ ಹೋಗಿದ್ದಾರೆ. ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಇದನ್ನೂ ಓದಿ:ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿಜಯ್ ಕುಲಕರ್ಣಿ, ಸೋಮು ನ್ಯಾಮಗೌಡ ಸಿಬಿಐ ವಿಚಾರಣೆ