ಬೆಂಗಳೂರು :ಆರ್ಆರ್ ನಗರ ಚುನಾವಣೆ ಪ್ರಚಾರದ ವೇಳೆ ಕೋವಿಡ್-19 ಕಾನೂನು ಉಲ್ಲಂಘನೆ ಆರೋಪದಡಿ ನಟ ದರ್ಶನ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ.
ಕೋವಿಡ್ ನಿಯಮ ಉಲ್ಲಂಘನೆ, ನಟ ದರ್ಶನ್ ಸೇರಿದಂತೆ ಹಲವರ ವಿರುದ್ದ ದೂರು - ಆರ್ಆರ್ ನಗರ ವಿಧಾನಸಭೆ ಉಪಚುನಾವಣೆ
ಆರ್ಆರ್ ನಗರ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ರೋಡ್ ಶೋ ನಡೆಸಿದ ನಟ ದರ್ಶನ್ ಸೇರಿದಂತೆ ಹಲವರ ವಿರುದ್ದ ದೂರು ದಾಖಲಿಸಲಾಗಿದೆ..
ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಠಾಣೆಯಲ್ಲಿ ಇಂತಿಷ್ಟು ಜನರು ಪ್ರಚಾರದಲ್ಲಿ ಭಾಗವಹಿಸುತ್ತಾರೆಂದು ಅನುಮತಿ ಪಡೆದಿದ್ದು, ನಿಗದಿಗಿಂತ ಹೆಚ್ಚು ಜನ ಸೇರಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ರೋಡ್ ಶೋ ನಡೆಸಿದ ನಟ ದರ್ಶನ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಿಸಲಾಗಿದೆ.
ಸದ್ಯ ಈ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದೂರು ಕೊಟ್ಟಿದ್ದಾರೆ. ದೂರು ಪಡೆದುಕೊಂಡಿದ್ದೇವೆ, ಅದರ ಬಗ್ಗೆ ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಸ್ಪಷ್ಟನೆ ನೀಡಿದ್ದಾರೆ. ಇನ್ನೊಂದೆಡೆ ನಟ ದರ್ಶನ್ ಸೇರಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದೂರು ನೀಡಿದ್ದಾರೆ.