ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಸರ್ಕಾರ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಅನೇಕ ನಿಯಮ ಜಾರಿ ಮಾಡಿದೆ. ಆದ್ರೆ, ಕೆಎಸ್ಆರ್ಟಿಸಿ ಬಸ್ನಲ್ಲಿ ನಿಯಮಗಳನ್ನ ಗಾಳಿಗೆ ತೂರಿ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆ ಸರ್ಕಾರ ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿ ಪ್ರತಿಯೊಬ್ಬರು ಅನುಸರಿಸುವಂತೆ ಸೂಚಿಸಿದೆ. ಆದರೆ, ಶಿವಮೊಗ್ಗದಿಂದ ಆನವೇರಿ ಮಾರ್ಗದ ಕೆಎಸ್ಆರ್ಟಿಸಿ ಬಸ್ನಲ್ಲಿ ಯಾವೊಬ್ಬ ಪ್ರಯಾಣಿಕರು ಮಾಸ್ಕ್ ಧರಿಸಿಲ್ಲ. ಅಷ್ಟೇ ಅಲ್ಲದೆ, ದೈಹಿಕ ಅಂತರ ಕಾಪಾಡದೇ ಕೋವಿಡ್ ನಿಯಮ ಉಲ್ಲಂಘಿಸಿ, ಪ್ರಯಾಣಿಸಿದ ದೃಶ್ಯ ಕಂಡುಬಂದಿದೆ.