ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಹಾಗೂ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಶಶಿಕಲಾ ನಟರಾಜನ್ ಆರೋಗ್ಯ ಸ್ಥಿರ - ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಆರೋಗ್ಯದಲ್ಲಿ ಸ್ಥಿರ
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಹಾಗೂ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
![ಶಶಿಕಲಾ ನಟರಾಜನ್ ಆರೋಗ್ಯ ಸ್ಥಿರ vk-sasikala-health-stable-victory-hospital-report](https://etvbharatimages.akamaized.net/etvbharat/prod-images/768-512-10364641-thumbnail-3x2-sasikala.jpg)
ಶಶಿಕಲಾ
ಓದಿ-ಕೆಎಸ್‌ಆರ್‌ಟಿಸಿ ಬಸ್-ಕಾರು ಮುಖಾಮುಖಿ: ಮಹಿಳಾ PSI ಸೇರಿ ನಾಲ್ವರ ದುರ್ಮರಣ
ಉಸಿರಾಟ ನಾರ್ಮಲ್ ಆಗಿದೆ. ಜ್ವರ ಇಳಿದಿದ್ದು, ಕೃತಕ ಉಸಿರಾಟ ವ್ಯವಸ್ಥೆ ಮುಂದುವರೆಸಲಾಗಿದೆ. ಈ ಮೂಲಕ ಕೊರೊನಾ ಸೋಂಕಿನ ಗುಣಲಕ್ಷಣಗಳು ಕ್ಷೀಣಿಸಿವೆ. ಆಸ್ಪತ್ರೆಯಿಂದ ನೀಡಲಾಗುವ ಆಹಾರ ಸೇವನೆ ಮಾಡಿ ಕೊರೊನಾ ಐಸಿಯು ವಾರ್ಡ್ನಲ್ಲಿ ವಾಕ್ ಮಾಡುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.