ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ಕೊರೊನಾ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಮಂಗಳವಾರದಿಂದ ನಡೆಯಬೇಕಿದ್ದ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.
ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದೂಡಿಕೆ: ಕರ್ಫ್ಯೂ ಮುಗಿದ ನಂತರ ದಿನಾಂಕ ಪ್ರಕಟ - ಕರ್ನಾಟಲ್ ಕರ್ಫ್ಯೂ
ರಾಜ್ಯಾದ್ಯಂತ ಕೊರೊನಾ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
vtu
ಈ ಬಗ್ಗೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಇಂಜಿನಿಯರಿಂಗ್, ಪಾಲಿಟೆಕ್ನಿಕ್ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹಾಗೇ ಡಿಪ್ಲೋಮಾ ಪ್ರಾಕ್ಟಿಕಲ್ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೊನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ಹೇಳಿದ್ದಾರೆ.