ಬೆಂಗಳೂರು: ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಯಾವ ಆಧಾರದಲ್ಲಿ ಈ ತೀರ್ಪು ಕೊಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸ ಅದಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಸಾಕಷ್ಟು ವಿವಾದಗಳು ಎದ್ದಿದ್ದವು. ಇಂದಿನ ತೀರ್ಪಿನ ಕುರಿತಂತೆಯೂ ಧರ್ಮದ ಮುಖಂಡರ ಜೊತೆ ಚರ್ಚೆ ನಡೆಯಲಿದೆ. ಸುಪ್ರೀಂ ಮೊರೆ ಹೋಗಲು ಚಿಂತನೆ ನಡೆದಿದೆ. ಎಲ್ಲರೂ ಶಾಂತಿ, ಸೌಹಾರ್ದಯುತವಾಗಿ ವರ್ತಿಸುವಂತೆ ಕೋರಿಕೊಳ್ಳಲಾಗಿದೆ ಎಂದರು.
ಕಾನೂನಾತ್ಮಕವಾಗಿ ನಾವು ನಮ್ಮ ಹಕ್ಕನ್ನು ಪಡೆದುಕೊಳ್ಳುತ್ತೇವೆ. ಹೈಕೋರ್ಟ್ ತೀರ್ಪು ಬಂದಿದ್ದು, ಮೂರು ಮಂದಿ ನ್ಯಾಯಾಧೀಶರ ಪೈಕಿ ಒಬ್ಬರು ಮುಸ್ಲಿಂ ಜಡ್ಜ್ ಕೂಡ ಇದ್ದರು. ಯಾವ ಆಧಾರದ ಮೇಲೆ ತೀರ್ಪು ಕೊಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ಕುರಾನ್‌ನಲ್ಲಿ ಹಿಜಾಬ್ ಕಡ್ಡಾಯ ಅಂತಾ ಹೇಳಿದೆ.