ಬೆಂಗಳೂರು:ಉಪಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರಕ್ಕೆ ಕಾರ್ಯತಂತ್ರ ಹೆಣೆಯುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರಕ್ಕೆ ಜೆಡಿಎಸ್ ತಂತ್ರ ಹೆಣೆಯುತ್ತೆ ; ಹೆಚ್ಡಿಕೆ - H D Kumaraswamy on byelection
ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ತಂತ್ರಗಳನ್ನು ಎದುರಿಸಲು ನಾವು ಮಾನಸಿಕವಾಗಿ ಸಿದ್ಧರಾಗಿದ್ದೇವೆ. ಈ ಎರಡೂ ಪಕ್ಷಗಳನ್ನು ಎದುರಿಸುವುದು ನಮಗೊಂದು ದೊಡ್ಡ ಸವಾಲು..
ಜೆಪಿನಗರದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ತಂತ್ರಗಳನ್ನು ಎದುರಿಸಲು ನಾವು ಮಾನಸಿಕವಾಗಿ ಸಿದ್ಧರಾಗಿದ್ದೇವೆ. ನಮ್ಮದು ಪ್ರಾದೇಶಿಕ ಪಕ್ಷ. ರಾಷ್ಟ್ರಮಟ್ಟದಲ್ಲಿ ಪ್ರಧಾನಮಂತ್ರಿ ಸ್ಥಾನ ಕೊಟ್ಟಂತಹ ಪಕ್ಷವಾದರೂ, ಇಂದು ಶಕ್ತಿ ಇರುವಂತದ್ದು ಕರ್ನಾಟಕದಲ್ಲಿ. ಉಪ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ನಾವು ಎದುರಿಸಬೇಕಾಗಿದೆ. ಇದೊಂದು ದೊಡ್ಡ ಸವಾಲು ಎಂದರು.
ಶಿರಾ ಕ್ಷೇತ್ರವನ್ನು ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾದ ಹಿನ್ನೆಲೆ ಕಾರ್ಯಕರ್ತರ ಹಾಗೂ ಆಕಾಂಕ್ಷಿಗಳನ್ನು ಇಂದು ಕರೆದು ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.