ಬೆಂಗಳೂರು:ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-2 ಚಂದಿರನ ಅಂಗಳ ತಲುಪುವ ಕೊನೆಯ ನಿಮಿಷಗಳಲ್ಲಿ ಆರ್ಬಿಟರ್ನಿಂದ ಲ್ಯಾಂಡರ್ ಸಂಪರ್ಕ ಕಳೆದುಕೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಒಗ್ಗೂಡಿ ಬಾಹ್ಯಾಕಾಶ ವಿಜ್ಞಾನಿಗಳ ಪರ ನಿಂತು, 'ಭರವಸೆ ಕಳೆದುಕೊಳ್ಳದಂತೆ' ಧೈರ್ಯ ತುಂಬುತ್ತಿದ್ದಾರೆ.
ಲ್ಯಾಂಡರ್ ಸಂಪರ್ಕ ಕಳೆದುಕೊಂಡಿದ್ದನ್ನು ಇಸ್ರೋ ಅಧ್ಯಕ್ಷ ಘೋಷಣೆ ಮಾಡುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಮುಖಂಡರು ವಿಜ್ಞಾನಿಗಳಿಗೆ ಧೈರ್ಯ ತುಂಬಿದರು. ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ. ನಮಗೆ ಇನ್ನೂ ಭರವಸೆ ಇದೆ. ಧೈರ್ಯ ಕಳೆದುಕೊಳ್ಳಬೇಡಿ ಎಂದು ಬೆನ್ನು ತಟ್ಟುತ್ತಿದ್ದಾರೆ.