ಬೆಂಗಳೂರು:ಪೋಷಕರಿಂದ ದೂರವಾಗಿ ಅಲೆಯುತ್ತಿದ್ದ ಬಾಲಕನನ್ನ ಪುನಃ ಪೋಷಕರ ಮಡಿಲಿಗೆ ಸೇರಿಸುವ ಮೂಲಕ ಬೆಂಗಳೂರಿನ ಯುವಕರು ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಎರಡು ವಾರಗಳ ಹಿಂದೆ ನಗರದ ಬಿಟಿಎಂ ಲೇಔಟ್ ಬಳಿ ಹಸಿವಿನಿಂದ ಓಡಾಡುತ್ತಿದ್ದ ಉತ್ತರ ಭಾರತ ಮೂಲದ ಸುಹಾಸ್ ಎಂಬ ಬಾಲಕನನ್ನ ಸ್ಥಳೀಯ ಬೇಕರಿ ಮಾಲೀಕ ರಾಜಣ್ಣ, ಯುವಕರಾದ ನಿತಿನ್ ಮತ್ತು ಶ್ರೀಧರ್ ಗಮನಿಸಿ ವಿಚಾರಿಸಿದ್ದಾರೆ.
ಹಿಂದಿ ಭಾಷೆ ಮಾತನಾಡುತ್ತಿದ್ದ 16-17 ವರ್ಷದ ಬಾಲಕನಿಗೆ ಊರಿನ ಹೆಸರು ಮರೆತಿತ್ತು ಮತ್ತು ತಿಳುವಳಿಕೆ ಇಲ್ಲದ ಕಾರಣ ತನ್ನ ಪೋಷಕರ ಮಾಹಿತಿ ಕೊಡಲು ಆಗಿರಲಿಲ್ಲ. ಆದರೆ, ಬಾಲಕ ಸುಹಾಸ್ ಹೇಳಿದ್ದ ಅಣ್ಣನ ಹೆಸರನ್ನ ಫೇಸ್ ಬುಕ್ನಲ್ಲಿ ಹುಡುಕಾಡಿದಾಗ ಪಶ್ಚಿಮ ಬಂಗಾಳದಲ್ಲಿರುವ ತನ್ನ ಅಣ್ಣನ ಫೋಟೋವನ್ನ ಗುರುತಿಸಿದ್ದ. ಕೂಡಲೇ ಮೆಸೆಂಜರ್ ಮೂಲಕ ಆತನ ಅಣ್ಣನನ್ನ ಸಂಪರ್ಕಿಸಿದ್ದಾರೆ.