ಬೆಂಗಳೂರು: ಬಿಜೆಪಿಯಲ್ಲಿ ಭುಗಿಲೆದ್ದಿರುವ ಆಂತರಿಕ ಭಿನ್ನಮತದ ಬಗ್ಗೆ ಸಚಿವ ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಭಿನ್ನಮತದ ಬಗ್ಗೆ ಸಚಿವ ಗೋಪಾಲಯ್ಯ ಹೇಳಿದ್ದೇನು? - ಬಿಜೆಪಿ ಆಂತರಿಕ ಭಿನ್ನಮತದ ಬಗ್ಗೆ ಸಚಿವ ಗೋಪಾಲಯ್ಯ ಹೇಳಿಕೆ
ಭಿನ್ನಮತೀಯರು ಮೀಟಿಂಗ್ ಮಾಡಿರುವ ಬಗ್ಗೆ ನನಗೆ ಏನು ಗೊತ್ತಿಲ್ಲ. ಬಿಜೆಪಿ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಮುಖ್ಯಮಂತ್ರಿಗಳು ನೋಡಿಕೊಳ್ಳುತ್ತಾರೆ ಎಂದು ಸಚಿವ ಗೋಪಾಲಯ್ಯ ಅವರು ಅಂಬರೀಶ್ ಜನ್ಮದಿನಾಚರಣೆಯಲ್ಲಿ ಭಾಗಿಯಾದ ವೇಳೆ ತಿಳಿಸಿದರು.
ಸಚಿವ ಗೋಪಾಲಯ್ಯ
ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸಮಾಧಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಮುಖ್ಯಮಂತ್ರಿಗಳು ನೋಡಿಕೊಳ್ಳುತ್ತಾರೆ. ಭಿನ್ನಮತೀಯರು ಮೀಟಿಂಗ್ ಮಾಡಿರುವ ಬಗ್ಗೆ ನನಗೆ ಏನು ಗೊತ್ತಿಲ್ಲ. ಅದರ ಬಗ್ಗೆ ಪರಿಶೀಲಿಸಲು ಹೈಕಮಾಂಡ್ ಇದೆ ಎಂದರು.
ನಾನು ಅಂಬರೀಶ್ ಹುಟ್ಟುಹಬ್ಬ ಆಚರಣೆಗೆ ಇಲ್ಲಿಗೆ ಬಂದಿದ್ದೇನೆ. ಇಲ್ಲಿ ಅಂತರಿಕ ವಿಷಯದ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಸಚಿವ ಗೋಪಾಲಯ್ಯ ಹೇಳಿದರು.