ಬೆಂಗಳೂರು : ಬೇಲಿಮಠದ ರಸ್ತೆಯಿಂದ ಶಾಂತಲಾ ಜಂಕ್ಷನ್‌ವರೆಗೆ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಗೂಡ್‌ಶೆಡ್ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ಮೈಸೂರು ರಸ್ತೆಯಿಂದ ಮೆಜಸ್ಟಿಕ್ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಕಾಮಗಾರಿ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಮುಚ್ಚಲಾಗುತ್ತದೆ ಎಂದು ಹೇಳಲಾಗಿದೆ.
ವೈಟ್ ಟಾಪಿಂಗ್ ಯೋಜನೆಯಡಿ ಗೂಡ್‌ಶೆಡ್ ರಸ್ತೆಯನ್ನು ಸುಮಾರು 11.88 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಬಿಜಿಎಸ್ ಫ್ಲೈಓವರ್, ಅಂಬೇಡ್ಕರ್ ಡೌನ್ ಲ್ಯಾಂಪ್‌ನಿಂದ ಡಾ.ಟಿಸಿಎಂ ರಾಯನ್ ರಸ್ತೆ ಮಾರ್ಗವಾಗಿ ಶಾಂತಲಾ ಜಂಕ್ಷನ್ ವರೆಗೆ ಎರಡು ಹಂತಗಳಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.