ಬೆಂಗಳೂರು:ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರದ ಬಗ್ಗೆ ಪಕ್ಷ ಇನ್ನೂ ಯಾವುದೇ ರೀತಿಯ ತೀರ್ಮಾನಕ್ಕೆ ಬಂದಿಲ್ಲ. ಕೋರ್ಟ್ ತೀರ್ಪಿನ ಬಳಿಕ ಯಾರಿಗೆ ಬೆಂಬಲ ಕೊಡಬೇಕು ಅನ್ನೋದನ್ನು ನಿರ್ಧರಿಸಲಾಗುತ್ತದೆ ಎಂದು ಬಿಜೆಪಿ ಸಂಸದ ಬಚ್ಚೇಗೌಡ ತಿಳಿಸಿದ್ದಾರೆ.
ಕೋರ್ಟ್ ತೀರ್ಪಿನ ಬಳಿಕ ಉಪಚುನಾವಣೆ ವಿಚಾರದ ಬಗ್ಗೆ ನಿರ್ಧಾರ: ಸಂಸದ ಬಚ್ಚೇಗೌಡ - ಬಿಜೆಪಿ ಸಂಸದ ಬಚ್ಚೇಗೌಡ
ಸದ್ಯ ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಯಾರಿಗೆ ಬೆಂಬಲ ಕೊಡಬೇಕು ಅನ್ನೋದನ್ನು ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಸಂಸದ ಬಚ್ಚೇಗೌಡ ಹೇಳಿದ್ದಾರೆ.
ಯಾರಿಗೆ ಬೆಂಬಲ ಎಂದು ಈಗಲೇ ಹೇಳಲಾಗುವುದಿಲ್ಲ: ಸಂಸದ ಬಚ್ಚೇಗೌಡ
ನಿನ್ನೆ ಹೊಸಕೋಟೆಯಲ್ಲಿ ನಡೆದ ಬಿಜೆಪಿ ಸಮಾರಂಭದಲ್ಲಿ ಗೈರಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅನಾರೋಗ್ಯದ ಕಾರಣ ನಿನ್ನೆಯ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.