ಬೆಂಗಳೂರು:ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಪತ್ತೆ ಹಚ್ಚಿ ದಂಡ ವಿಧಿಸಿದೆ. ಇನ್ನು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ 7 ಸಾವಿರಕ್ಕೂ ಹೆಚ್ಚು ಜನ ಟಿಕೆಟ್ ರಹಿತ ಪ್ರಯಾಣ ಮಾಡಿರುವುದು ಬೆಳಕಿಗೆ ಬಂದಿದೆ.
ಬಿಎಂಟಿಸಿ ದಂಡ:ಬಿಎಂಟಿಸಿ ಬಸ್ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ತಡೆದು ಸಂಸ್ಥೆಯ ಆದಾಯ ಸೋರಿಕೆ ಕಡಿತಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ನಗರ ಸಾರಿಗೆ ಸಂಸ್ಥೆ ತಿಳಿಸಿದೆ.
ಓದಿ:ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಮಾ.22ಕ್ಕೆ ವಿಚಾರಣೆ
ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿದ ತನಿಖಾಧಿಕಾರಿಗಳು ಫೆಬ್ರವರಿ ತಿಂಗಳಿನಲ್ಲಿಯೇ ಒಟ್ಟು 27,503 ಟ್ರಿಪ್‌ಗಳನ್ನು ತಪಾಸಣೆ ನೆಡೆಸಿ 3,325 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದಾರೆ. ಅಷ್ಟೇ ಅಲ್ಲದೇ 4,91,141 ರೂ ದಂಡ ವಸೂಲಿ ಮಾಡಿದ್ದಾರೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1,942 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 228 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 22,800 ವಸೂಲಿ ಮಾಡಲಾಗಿದೆ. ಒಟ್ಟಾರೆಯಾಗಿ 2022ರ ಫೆಬ್ರವರಿ ತಿಂಗಲಿನಲ್ಲೇ 3,553 ಪ್ರಯಾಣಿಕರಿಂದ ಒಟ್ಟು 5,13,941 ರೂ ದಂಡವನ್ನು ವಸೂಲಿ ಮಾಡಲಾಗಿದೆ. ದಂಡವನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94 ರ ಪ್ರಕಾರ ವಿಧಿಸಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
ಸಾರ್ವಜನಿಕರು ಸಹಕರಿಸಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್ ಅಥವಾ ದಿನದ ಮಾಸಿಕ ಪಾಸುಗಳನ್ನು ಖರೀದಿಸಿ ಪ್ರಯಾಣಿಸುವುದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ.