ಬೆಂಗಳೂರು :ನಗರದಲ್ಲಿ ಲಾಕ್ಡೌನ್ ಸಡಿಲಿಕೆ ಆಗುತ್ತಿದ್ದಂತೆ ಸರಗಳ್ಳರ ಹಾವಳಿ ಪ್ರಾರಂಭವಾಗಿದೆ. ದೊಡ್ಡಣ್ಣ ಕೈಗಾರಿಕಾ ಪ್ರದೇಶದಲ್ಲಿ ಮಹಿಳೆಯ ಚಿನ್ನದ ಸರ ಕದ್ದು ಪರಾರಿಯಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೊಂಚು ಹಾಕಿ ಮಹಿಳೆಯ ಚಿನ್ನದ ಸರ ಎಗರಿಸಿದ ಖದೀಮ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ - chain snatching video
ದೊಡ್ಡಣ್ಣ ಕೈಗಾರಿಕಾ ಪ್ರದೇಶದ 8ನೇ ಕ್ರಾಸ್‌ನಲ್ಲಿ ಜೂನ್ 4ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜಗೋಪಾಲ್‌ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..
ಚಿನ್ನದ ಸರ ಕಳ್ಳತನ
ಸೀತಾ ಮಹಾಲಕ್ಷ್ಮಿ ಎಂಬ ಮಹಿಳೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಹಿಂದೆ ಇಂದ ಬಂದ ಕಳ್ಳ ಸರ ಕದ್ದು ಪರಾರಿಯಾಗಿದ್ದಾನೆ. ದೊಡ್ಡಣ್ಣ ಕೈಗಾರಿಕಾ ಪ್ರದೇಶದ 8ನೇ ಕ್ರಾಸ್‌ನಲ್ಲಿ ಜೂನ್ 4ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜಗೋಪಾಲ್‌ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.