ಬೆಂಗಳೂರು:ಗಂಡನ ಮನೆಯವರ ಮಾನಸಿಕ, ದೈಹಿಕ ಕಿರುಕುಳ ತಾಳಲಾರದೆ ಸೀಮೆಎಣ್ಣೆ ಸುರಿದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವರಜೀವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಡಿ.ಜೆ.ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ವಾಸವಾಗಿದ್ದ ಅನಿಶಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಅನಿಶಾ ಜೊತೆ ನಿಜಾಮುದ್ದೀನ್ ಎರಡನೇ ಮದುವೆಯಾಗಿದ್ದರು. ಆರಂಭದಲ್ಲಿ ದಂಪತಿ ಅನ್ಯೋನ್ಯತೆಯಿಂದ ಇದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಹೀಗಿದ್ದರೂ ನಿಜಾಮುದ್ದೀನ್ ಆಗಾಗ ಹೆಂಡ್ತಿಗೆ ನೀನು ಕುರೂಪಿ, ಸುಂದರವಾಗಿಲ್ಲ. ಬೇಗನೆ ಸತ್ತರೆ ಮತ್ತೊಂದು ಮದುವೆಯಾಗುತ್ತೇನೆ ಎಂದು ಕಿರುಕುಳ ನೀಡುತ್ತಿದ್ದನಂತೆ. ಇದಕ್ಕೆ ತಾಯಿ ಖಲೀಂ ಉನ್ನಿಸಾ ಸಾಥ್ ನೀಡಿದ್ದಳು ಎಂಬ ಆರೋಪ ಕೇಳಿಬಂದಿದೆ.