ದೊಡ್ಡಬಳ್ಳಾಪುರ :ತಾಲೂಕಿನ ವಡಗೆರೆ ಗ್ರಾಮದಲ್ಲಿ ಇಂದು ಬೆಳಗ್ಗೆ 5 ಗಂಟೆಯ ಸಮಯದಲ್ಲಿ ಮಹಿಳೆಯ ಕೊಲೆಯಾಗಿದೆ. ಮೃತ ಮಹಿಳೆಯ ಪತಿ ಸಂಬಂಧಿಕರ ಗೃಹ ಪ್ರವೇಶಕ್ಕೆ ತೆರಳಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ಇದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ.
ಗ್ರಾಮದ 35 ವರ್ಷದ ಮಹಿಳೆ ಕೊಲೆಯಾಗಿದ್ದಾಳೆ. ಘಟನೆ ನಂತರ ಗಂಡ ಚನ್ನಬಸವಯ್ಯನ ಫೋನ್ ಸ್ವಿಚ್ ಆಫ್ ಆಗಿದೆ. ಇನ್ನು ಕೊಲೆಯಾದ ಭಾಗ್ಯಶ್ರೀ ಇದೇ ಗ್ರಾಮದ ರಿಯಾಜ್ (27) ವರ್ಷದ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರಂತೆ.