ಕರ್ನಾಟಕ

karnataka

By

Published : Feb 15, 2020, 9:49 PM IST

ETV Bharat / city

ಮಾರ್ಚ್​ನಲ್ಲಿ ಮಹಿಳಾ ಸಮಾವೇಶ, ಶೀಘ್ರದಲ್ಲೇ ರಾಜ್ಯ ಮಹಿಳಾಧ್ಯಕ್ಷೆ ನೇಮಕ: ಹೆಚ್​ಡಿಡಿ

ಮಾರ್ಚ್ ಮೊದಲ ವಾರದಲ್ಲಿ ಅರಮನೆ ಮೈದಾನದಲ್ಲಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರೂತ್ ಮನೋರಮಾ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾವೇಶ ನಡೆಯಲಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ತಿಳಿಸಿದರು.

womens-convention-in-march-appointed-state-president-hdd
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ

ಬೆಂಗಳೂರು:ನಗರ ಮಹಿಳಾ ಘಟಕದ ಮುಖಂಡರ ಸಭೆ ಕರೆದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಚರ್ಚೆ ನಡೆಸಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಕಾರ್ಪೊರೇಷನ್ ಚುನಾವಣೆಗೆ ಸಿದ್ಧತೆ, ಸಂಘಟನೆ ಮತ್ತು ಮಾರ್ಚ್​ನಲ್ಲಿ ನಡೆಯಲಿರುವ ಮಹಿಳಾ ಸಮಾವೇಶದ ಕುರಿತು ಮಹಿಳಾ ಮುಖಂಡರ ಅಭಿಪ್ರಾಯಗಳನ್ನು ಗೌಡರು ಕೇಳಿದರು.

ಸಭೆ ನಂತರ ಸುದ್ದಿಗಾರರ ಜೊತೆ ದೇವೇಗೌಡರು ಮಾತನಾಡಿ, ಮಾರ್ಚ್ ಮೊದಲ ವಾರದಲ್ಲಿ ಅರಮನೆ ಮೈದಾನದಲ್ಲಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರೂತ್ ಮನೋರಮಾ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಮಾರ್ಚ್ ಮೊದಲ ವಾರದಲ್ಲಿ ಮಹಿಳಾ ಸಮಾವೇಶ

ರೂತ್ ಮನೋರಮಾ ಅವರಿಗೆ ದೇಶ-ವಿದೇಶದಲ್ಲಿ ಸಾಮಾಜಿಕ ಕೆಲಸ ಮಾಡಿರುವ ಅನುಭವ ಇದ್ದು, ನಗರದಲ್ಲಿ ಮಹಿಳಾ ಸಂಘಟನೆ ಮಾಡುತ್ತಿದ್ದಾರೆ. ನಾನು ಸುಮ್ಮನೆ ಕೂರುವುದಿಲ್ಲ. ಪಕ್ಷ ಸಂಘಟನೆ ಮಾಡಲು ನಿರಂತರ ಕೆಲಸ ಮಾಡುತ್ತೇನೆ. ಜೆಡಿಎಸ್​​ನ ಯುವ ಸಮಾವೇಶ ಸಹ ಮಾಡುತ್ತೇನೆ. ಅದೇ ರೀತಿ ರಾಜ್ಯ ಮಹಿಳಾ ಸಮಾವೇಶವನ್ನು ಬೆಂಗಳೂರಿನಲ್ಲಿ ಮಾಡುವುದಿಲ್ಲ. ಬೇರೆ ಕಡೆ ಮಾಡುವ ಬಗ್ಗೆ ಆಲೋಚಿಸಿದ್ದೇನೆ ಎಂದರು.

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲೀಲಾವತಿ ಆರ್ ಪ್ರಸಾದ್ ಅವರು ಅನಾರೋಗ್ಯದ ಕಾರಣ ರಾಜ್ಯಾಧ್ಯಕ್ಷೆಯಾಗಿ ಮುಂದುವರೆಯಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ. ಶೀಘ್ರದಲ್ಲೇ ಮಹಿಳಾ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡುತ್ತೇನೆ ಎಂದು ಹೇಳಿದರು.

ಲೋಕಸಭೆ, ವಿಧಾನಸಭೆ ಚುನಾವಣೆ ಸದ್ಯಕ್ಕಿಲ್ಲ. ನಾನು ರಾಜ್ಯಸಭೆಗೂ ಹೋಗುವ ಆಸಕ್ತಿ ಹೊಂದಿಲ್ಲ. ಹೀಗಾಗಿ ನಾನು ಇಲ್ಲೇ ಇದ್ದು ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುತ್ತೇನೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ದುಡಿಯಬೇಕೆಂಬ ಆಶಯ ಹೊಂದಿದ್ದೇನೆ. ಪಕ್ಷ ಸೋತರು, ಗೆದ್ದರೂ ಹೋರಾಟ ಮಾಡುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ನಗರದ ಹಲವು ವಾರ್ಡ್ ಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಪ್ರಮಾಣಪತ್ರವನ್ನು ದೇವೇಗೌಡರು ವಿತರಿಸಿದರು. ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್, ಮಹಿಳಾ ಘಟಕದ ಅಧ್ಯಕ್ಷೆ ರೂತ್ ಮನೋರಮಾ ಮತ್ತಿತರ ಮಹಿಳಾ ಮುಖಂಡರು ಭಾಗವಹಿಸಿದ್ದರು.

ABOUT THE AUTHOR

...view details