ಕರ್ನಾಟಕ

karnataka

ETV Bharat / city

ತಮಿಳುನಾಡು ಸರ್ಕಾರದ ಹೊಗೇನಕಲ್ ಯೋಜನೆಗೆ ಅವಕಾಶ ಕೊಡಲ್ಲ: ಸಚಿವ ಕಾರಜೋಳ - ಹೊಗೇನಕಲ್ ಯೋಜನೆಯ ಡಿಪಿಆರ್ ತಯಾರಿಸಿದ ತಮಿಳುನಾಡು

ಹೊಗೇನಕಲ್ ಯೋಜನೆಯನ್ನು ಕರ್ನಾಟಕ ಸರ್ಕಾರ ಎಲ್ಲ ಕಾನೂನಾತ್ಮಕ ಕ್ರಮಗಳ ಮೂಲಕ ಆಕ್ಷೇಪಿಸಲಿದೆ. ತಮಿಳುನಾಡು ಪ್ರಕಟಿಸಿರುವ ಯೋಜನೆ ಕರ್ನಾಟಕ ಮತ್ತು ತಮಿಳುನಾಡು ಎರಡು ರಾಜ್ಯಗಳ ಭೌಗೋಳಿಕ ವ್ಯಾಪ್ತಿಯಲ್ಲಿ ಇರುವುದರಿಂದ ಯಾವುದೇ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ವಿವಿಧ ಆಯಾಮಗಳಲ್ಲಿ ಹಾಗೂ ಕಾನೂನಾತ್ಮಕ ಪರಿಶೀಲನೆಗೆ ಒಳಪಡಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.

Hogenakal Project
Hogenakal Project

By

Published : Jan 21, 2022, 1:41 PM IST

ಬೆಂಗಳೂರು: ತಮಿಳುನಾಡು ಸರ್ಕಾರ ಕೈಗೆತ್ತಿಕೊಳ್ಳಲು ಹೊರಟಿರುವ ಹೊಗೇನಕಲ್ 2ನೇ ಹಂತದ ಯೋಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಹೊಗೇನಕಲ್ ಯೋಜನೆಯ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿ.ಪಿ.ಆರ್. (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವುದಾಗಿ ಘೋಷಿಸಿರುವುದು ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದೆ.

ಕಾವೇರಿ ಕಣಿವೆಯಲ್ಲಿ ನ್ಯಾಯಾಧೀಕರಣ ಹಾಗೂ ಸರ್ವೋಚ್ಛ ನ್ಯಾಯಾಲಯದ ತೀರ್ಪುಗಳಲ್ಲಿನ ನೀರಿನ ಹಂಚಿಕೆಗಳ ಅನ್ವಯವಾಗಿ ತಮಿಳುನಾಡು ರಾಜ್ಯವು ಯೋಜನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಈ ಯೋಜನೆಯ ವಿವರಗಳನ್ನು ನ್ಯಾಯಾಧೀಕರಣ ಅಥವಾ ಸರ್ವೋಚ್ಛ ನ್ಯಾಯಾಲಯದ ಮುಂದೆ ಪ್ರಸ್ತುತ ಪಡಿಸದೇ ಇರುವ ತಮಿಳುನಾಡಿನ ಯಾವುದೇ ಯೋಜನೆಯನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದರು.

ತಮಿಳುನಾಡು ಸರ್ಕಾರದ ಹೊಗೇನಕಲ್ ಯೋಜನೆಗೆ ಅವಕಾಶ ಕೊಡಲ್ಲ: ಸಚಿವ ಕಾರಜೋಳ

ಈ ಯೋಜನೆಯನ್ನು ಕರ್ನಾಟಕ ಸರ್ಕಾರ ಎಲ್ಲ ಕಾನೂನಾತ್ಮಕ ಕ್ರಮಗಳ ಮೂಲಕ ಆಕ್ಷೇಪಿಸಲಿದೆ. ತಮಿಳುನಾಡು ಪ್ರಕಟಿಸಿರುವ ಯೋಜನೆ ಕರ್ನಾಟಕ ಮತ್ತು ತಮಿಳುನಾಡು ಎರಡು ರಾಜ್ಯಗಳ ಭೌಗೋಳಿಕ ವ್ಯಾಪ್ತಿಯಲ್ಲಿ ಇರುವುದರಿಂದ ಯಾವುದೇ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ವಿವಿಧ ಆಯಾಮಗಳಲ್ಲಿ ಹಾಗೂ ಕಾನೂನಾತ್ಮಕ ಪರಿಶೀಲನೆಗೆ ಒಳಪಡಬೇಕಾಗುತ್ತದೆ ಎಂದರು.

ತಮಿಳುನಾಡು ಏಕಪಕ್ಷೀಯವಾಗಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಹೊಗೇನಕಲ್ ಪ್ರದೇಶವು ಕರ್ನಾಟಕ ಮತ್ತು ತಮಿಳುನಾಡಿನ ಜಂಟಿ ಗಡಿ ಪ್ರದೇಶದಲ್ಲಿ 64 ಕಿ.ಮೀ ಉದ್ದದ ಭೂ ಪ್ರದೇಶದ ವ್ಯಾಪ್ತಿಯನ್ನು ಹೊಂದಿರುತ್ತದೆ. ಕಾವೇರಿ ನ್ಯಾಯಾಧಿಕರಣದ ಐತೀರ್ಪಿನ ಕಲಂ 13ರ ಅನ್ವಯ ಈ ಯೋಜನೆಯನ್ನು ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) ಮೂಲಕ ಕೈಗೆತ್ತಿಕೊಳ್ಳಬೇಕಾಗುವುದು ಎಂದು ಹೇಳಿದರು.

ಕರ್ನಾಟಕ ಮತ್ತು ತಮಿಳುನಾಡಿನ ಹೊಗೇನಕಲ್ ಜಂಟಿ ಗಡಿ ರೇಖೆಯನ್ನು ಸರ್ವೇ ಆಫ್ ಇಂಡಿಯಾ ಮೂಲಕ ಅಂತಿಮಗೊಳಿಸಲಾಗಿಲ್ಲ. ಹಾಗಾಗಿ, ತಮಿಳುನಾಡಿನ ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details