ಬೆಂಗಳೂರು:ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಅಕ್ರಮ ಎಸಗಿರುವ ಬಿಜೆಪಿ ಸರ್ಕಾರ ಇದೀಗ ಆಸ್ಪತ್ರೆಯ ನಿರ್ದೇಶಕರನ್ನೇ ರಜೆಯ ಮೇಲೆ ಕಳಿಸಿ ತನ್ನ ಅಕ್ರಮವನ್ನು ಮುಚ್ಚಿಹಾಕುವ ಯತ್ನ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಗಂಭೀರ ಆರೋಪ ಮಾಡಿದ್ದಾರೆ.
ಆಸ್ಪತ್ರೆ ನಿರ್ದೇಶಕರಿಗೆ ಆರು ವಾರ ರಜೆ ಕೊಟ್ಟಿದ್ದೇಕೆ?: ಬಿಜೆಪಿ ವಿರುದ್ಧ ಖಂಡ್ರೆ ಟ್ವೀಟಾಸ್ತ್ರ
ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಅಕ್ರಮ ಎಸಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ಆಸ್ಪತ್ರೆ ವೈದ್ಯರನ್ನು ದಿಢೀರ್ ರಜೆ ಮೇಲೆ ಕಳಿಸಿರುವುದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಟ್ವಿಟರ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಅಕ್ರಮ ಎಸಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ಅವರನ್ನು ಆರು ವಾರಗಳ ಕಾಲ ರಜೆ ಮೇಲೆ ಕಳುಹಿಸಿದೆ. ಆಸ್ಪತ್ರೆಗೆ ಸಂಬಂಧವೇ ಇಲ್ಲದವರನ್ನು ನಿರ್ದೇಶಕರನ್ನಾಗಿಸುವ ಪ್ರಯತ್ನ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಕಿಡಿಕಾರಿದ್ದಾರೆ.
ಇದರ ಜೊತೆಗೆ ಕೋವಿಡ್ ಸಮಸ್ಯೆ ಇರುವಾಗಲೇ ನಿರ್ದೇಶಕರನ್ನು ರಜೆಗೆ ಕಳುಹಿಸಿದ್ದು ಯಾಕೆ?. ಏಕಾಏಕಿ ನಿರ್ದೇಶಕರನ್ನು ಬದಲಾಯಿಸೋದು ಯಾಕೆ?. ಇದರ ಹಿಂದೆ ಯಾರ ಹಿತಾಸಕ್ತಿ ಇದೆ ಸ್ವಾಮಿ? ರಾಜ್ಯದ ಜನ ಪ್ರಶ್ನೆ ಕೇಳ್ತಿದ್ದಾರೆ, ಉತ್ತರಿಸಿ ಎಂದು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.